ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಶಾಲಾ ವಾರ್ಷಿಕ ಕ್ರೀಡೋತ್ಸವ 2024ಉದ್ಘಾಟನೆ ಕಾರ್ಯಕ್ರಮ

Published

on

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು. ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಪುತ್ತೂರು ಅರಣ್ಯ ಇಲಾಖೆಯ ಬಿಟ್ ಅಧಿಕಾರಿ ರಾಜು ಚಂದ್ರ ನೆರವೇರಿಸಿದರು.

 

 

ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ತಂದು ಮುಖ್ಯ ಅಥಿತಿ ಯಾದ ಪುತ್ತೂರು ಸಂಚಾರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕುಟ್ಟಿ ಇವರಿಗೆ ಹಸ್ತಾಂತರ ಮಾಡಿದರು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಹಾರಾಡಿ ಸರಕಾರಿ ಶಾಲೆಯಲ್ಲಿ ಸುಮಾರು 850 ವಿಧ್ಯಾರ್ಥಿಗಳು ಇರುವುದನ್ನು ಹರ್ಷ ವ್ಯಕ್ತಪಡಿಸಿದರು.

 

ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಭಾರತ ದೇಶವನ್ನು ಕಟ್ಟುವರಂತಾಗಬೇಕೆಂದು ಆಶಯವನ್ನು ವ್ಯಕ್ತಪಡಿಸಿದರು.

 

 

 

 

ಶಾಲಾ ಮೇಲುಸ್ತುವಾರಿ ಅಧ್ಯಕ್ಷರಾದ ಶ್ರೀಮತಿ ಸುಲೋಚನಿ ಇವರು ಅಧ್ಯಕ್ಷತೆ ವಹಿಸಿದ್ದು ವಿದ್ಯಾರ್ಥಿಗಳ ಕ್ರೀಡಾ ಸ್ಪೂರ್ತಿ ಹೆಚ್ಚುವಂತೆ ಪ್ರಾಮಾಣಿಕತೆಯಿಂದ ಸೋಲು ಗೆಲುವಿನ ಬಗ್ಗೆ ಚಿಂತಿಸದೇ ಕ್ರೀಡಾ ಸ್ಪೂರ್ತಿಯಿಂದ ಆಟವಾಡಿ ಎಂದು ತಿಳಿಸಿದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು ಕಾರ್ಯಕ್ರಮದಲ್ಲಿ sdmc ಉಪಾಧ್ಯಕ್ಷರಾದ ಇಸ್ಮಾಯಿಲ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದು ಶಾಲಾ ಮಕ್ಕಳ ಪೋಷಕರು ಹಾಗೂ ಶಾಲಾ ಅಧ್ಯಾಪಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕೆಕೆ ಮಾಸ್ಟರ್ ಇವರು ಸ್ವಾಗತಿಸಿದರು.
ಶಾಲಾ ಶಿಕ್ಷಕಿ ಶ್ರೀಮತಿ ಶುಭಲತಾ ಇವರು ಧನ್ಯವಾದಗೈದರು ಹಾಗೂ ಶಿಕ್ಷಕಿಯಾದ ಶ್ರೀ ವನಿತಾ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version