Published
4 weeks agoon
By
Akkare Newsಪುತ್ತೂರು: ರಾಜ್ಯದ ಚೆನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಗಾಂಧೀಕಟ್ಟೆಯ ಎದುರು ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ರೋಷನ್ ರೈ ಬನ್ನೂರು, ಶರೀಫ್ ಬಲ್ನಾಡು, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕು ಬಾಯಬೆ, ಹನೀಫ್ ಮಾಡಾವು, ದಾಮೋದರ ಭಂಡಾರ್ಕರ್, ಸುಪ್ರೀತ್ ಕಣ್ಣರಾಯ, ಇಸ್ಮಾಯಿಲ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್ಷದ್ ದರ್ಬೆ ವಂದಿಸಿದರು.