Published
4 weeks agoon
By
Akkare Newsಬೆಂಗಳೂರು : ಉಪ ಚುನಾವಣಾ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ರಾಜ್ಯದ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.
ಸಂಡೂರಿನಲ್ಲಿ ಭಾಗಶಃ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಮುನ್ನಡೆ ಕಾಯ್ದುಕೊಂಡು ಸಾಗುತ್ತಿದ್ದಾರೆ. ಈ ಮಧ್ಯರ ಶಿಗ್ಗಾಂವಿಯಲ್ಲಿ ಬಿಜೆಪಿ ಹಿನ್ನಡೆ ಹೊಂದಿದೆ.
ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಸಧ್ಯ ಸೋಲಿನ ಸುಳಿಯಲ್ಲಿ ಸಿಲುಕಿದ್ದು ಕನ್ನಡಿಗರು ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಜೈಕಾರ ಹಾಕಿದ್ದು ಇದರಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ.