ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಹವಾಮಾನ

ಕರ್ನಾಟಕ ರೈನ್ಸ್ : ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 10ರ ವರೆಗೆ ಭಾರೀ ಮಳೆ ಮುನ್ಸೂಚನೆ

Published

on

ಕರ್ನಾಟಕ ರೈನ್ಸ್ : ಇದೀಗ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 10ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾಹಿತಿ ಇಲ್ಲಿದೆ ತಿಳಿಯಿರಿ:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 24) ಬೆಳಗ್ಗೆ ಮಂಜು ಮುಚ್ಚಿದ ವಾತಾವರಣ ಇದ್ದು, ಮಧ್ಯಾಹ್ನದವರೆಗೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಸಂಜೆ 4 ಆಗುತ್ತಿದ್ದಂತೆ ಸೂರ್ಯನ ಕಿರಣಗಳು ಬೀಳತೊಡಗಿದ್ದು, ರಾತ್ರಿ ವೇಳೆಗೆ ಚಳಿ ಜೊತೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದ ಎನ್ನುವ ಮುನ್ಸೂಚನೆ ಇದೆ.
ನವೆಂಬರ್ 24ರಿಂದ ಡಿಸೆಂಬರ್ 2ರ ವರೆಗೆ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬೆಳಗ್ಗೆ, ಸಂಜೆ ಚಳಿ ಇರಲಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

Rain Alert: ಕರ್ನಾಟಕದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!
ಡಿಸೆಂಬರ್ 2ರಿಂದ 10ರ ವರೆಗೆ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.
ಇನ್ನು ಈ ಬಾರಿ ಆಂದರೆ 2024ರ ಜೂನ್ ಆರಂಭದಲ್ಲಿಯೇ ರಾಜ್ಯದ ಮುಂಗಾರು ಎಂಟ್ರಿ ಕೊಟ್ಟಿದ್ದು, ಪರಿಣಾಮ ಸಣ್ಣ-ಪುಟ್ಟ ಕೆರೆ-ಕಟ್ಟೆ, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

 

 

 

 

ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಹುಬ್ಬಳ್ಳಿ, ಕೊಡಗು, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಶಿವಮೊಗ್ಗ, ಹಾಸನ, ಚಾಮರಾಜನಗರ, ಕಲಬುರಗಿ, ಬೀದರ್, ತುಮಕೂರು, ಮಂಡ್ಯ, ಹಾವೇರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟಿಸಿದೆ. ಪರಿಣಾಮ ಬೆಳೆಗಳೆಲ್ಲ ಚೆನ್ನಾಗಿ ಬಂದಿದ್ದು, ಇದರಿಂದ ರೈತರ ಮುಖದಲ್ಲಿ ಕಮರಿದ್ದ ಮಂದಹಾಸ ಮತ್ತೆ ಬಂದಂತಾಗಿದೆ.
2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ಹೋಗಿದ್ದವು. ಅಲ್ಲದೆ, ಜಲಮೂಲಗಳೆಲ್ಲ ಬತ್ತಿಹೋಗುವ ಹಂತವನ್ನು ತಲುಪಿ ಅಂತರ್ಜಲ ಮಟ್ಟ ಕುಸಿಯುತ್ತಲೇ ಇತ್ತು. ಇದರಿಂದ ಬೋರ್‌ವೆಲ್‌ಗಳಲ್ಲಿ ನೀರೇ ಇಲ್ಲದೆ ರೈತರು ಕಂಗಾಲಾಗಿದ್ದರು. ಆದರೆ, 2024ರ ಜೂನ್‌ ಆರಂಭ ಆಗುತ್ತಿದ್ದಂತೆ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸಿದ್ದು, ಪರಿಣಾಮ ಜಲಮೂಲಗಳೆಲ್ಲ ಭರ್ತಿಯಾದವು. ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement