Published
4 weeks agoon
By
Akkare News34 ನೆಕ್ಕಿಲಾಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಸರ್ವಿಸ್ ರಸ್ತೆಯ ಸೂಕ್ತ ನಿರ್ವಹಣೆ ಮಾಡದೇ ಮನಸೋ ಇಚ್ಛೇ ಕಾಮಗಾರಿ ನಡೆಸಲಾಗುತ್ತಿದೆ.
ಇದರಿಂದಾಗಿ ಅನೇಕ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೆ ಇಡಾಗಿದ್ದಾರೆ. ಇಂದು ಸಂಜೆ ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಅಬ್ದುಲ್ ರಹಿಮಾನ್ ಯುನಿಕ್ ರವರು ಕೆಲಸ ನಮಿತ ದ್ವಿಚಕ್ರದಲ್ಲಿ ಹೋಗುತ್ತಿದ್ದಾಗ ರಸ್ತೆಯ ಗುಂಡಿಗೆ ಬಿದ್ದು ಅವರ ಕೈ ಮತ್ತು ಕಾಲಿಗೆ ಗಾಯವಾಗಿದೆ.
ಈಗಾಗಿ ರಸ್ತೆಯ ಜವಾಬ್ದಾರಿ ಹೊತ್ತಿರುವ ಕಾಂಟ್ರಾಕ್ಟರ್ ಮತ್ತು ಇಂಜಿನಿಯರ್ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ದಾಖಲಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಲಾಗಿದೆ.