ಪುತ್ತೂರು: ಅರಿಯಡ್ಕ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 144 ಮತಗಳ ಅಂತರದಿಂದ ವಿನಯ ಕುಮಾರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಪಂಚಾಯತ್ ನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.


ಅರಿಯಡ್ಕ ಗ್ರಾ.ಪಂನ ಮಾಡ್ನೂರು 2ನೇ ವಾರ್ಡ್‌ನ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಕುಮಾರ್ 433 ಮತ ಪಡೆದು ಜಯಗಳಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರೀಶ್ ಎ.ಕೆ ಮಾಡ್ನೂರು ಮತ 289 ಪಡೆದುಕೊಂಡಿದ್ದಾರೆ. 10 ಮತ ತಿರಸ್ಕೃತಗೊಂಡಿದೆ.

ಕೆದಂಬಾಡಿ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ತ್ರಿಕೋನ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ 30 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತೆರೋ 272 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ. ಮೋಹನ್ 242 ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ರಫೀಕ್ ನಂಜೆ 108 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತ ತಿರಸ್ಕೃತಗೊಂಡಿದೆ.
ಕಳೆದ ಚುನಾವಣೆಯಲ್ಲಿ ಪಂಚಾಯತ್ ನ ಒಟ್ಟು 10 ಸ್ಥಾನಗಳಲ್ಲಿ 7 ಬಿಜೆಪಿ ಬೆಂಬಲಿತ , 2 ಕಾಂಗ್ರೆಸ್ ಬೆಂಬಲಿತ ಹಾಗೂ 1 ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಒಂದು ಸ್ಥಾನ ಹೆಚ್ಚಿಸಿಕೊಂಡಿದೆ.




