ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಸರಕಾರದ ಪಂಚ ಗ್ಯಾರಂಟಿ ತಳಮಟ್ಟಕ್ಕೂ ತಲುಪಿದೆ: ಶಾಸಕ ಅಶೋಕ್ ರೈ

Published

on

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರಂಟಿ ಸಮಾಜದ ಕಟ್ಟಕಡೇಯ ವ್ಯಕ್ತಿಗೂ ತಲುಪಿದೆ ಎಂಬುದಕ್ಕೆ ಗ್ರಾಪಂ ಉಪಚುನಾವಣಾ ಪಲಿತಾಂಶ ಸಾಕ್ಷಿಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ಉಪ ಚುನಾವಣೆಯಲ್ಲಿ ಮೂರರಲ್ಲಿ ಮೂರು ಕೂಡಾ ಕಾಂಗ್ರೆಸ್ ಬೆಂಬಲಿತರು ಜಯಗಳಿಸಿದ್ದರ ಬಗ್ಗೆ ಶಾಸಕರು ಪ್ರತಿಕ್ರಿಯೆ ನೀಡಿದರು.
ಸರಕಾರ ಬಡವರ ಕಲ್ಯಾಣಕ್ಕೆಂದೇ ಪಂಚ ಗ್ಯಾರಂಟಿಯನ್ನು ಜಾರಿಗೆ ತಂದಿತ್ತು ಇದರ ಪ್ರತಿಫಲವಾಗಿ ಜನ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಚುನಾವಣೆಗೆ ಮುಂಚೆ ನಾನು ನನ್ನ ಕ್ಷೇತ್ರದ ಜನತೆಗೆ ನೀಡಿದ್ದ ಭರವಸೆಗಳನ್ನು ಒಂದೊಂದಾಗಿ ಈಡೇರಿಸಿಕೊಂಡು ಬರುತ್ತಿದ್ದೇನೆ, ಭೃಷ್ಟಾಚಾರ ರಹಿತ ಆಡಳಿತ ನೀಡುವ‌ಮೂಲಕ ಜನ ಸಾಮಾನ್ಯರೂ ಸಂತೃಪ್ತರಾಗುವ ರೀತಿಯಲ್ಲಿ ಕೆಲಸ ಮಾಡಿದ ತೃಪ್ತಿ ನನಗಿದೆ.‌ಮುಂದಿನ‌ದಿನಗಳಲ್ಲಿ ನೀಡಿದ್ದ‌ಭರವಸೆಗಳನ್ನು ಒಂದೊಂದಾಗಿ ಈಡೇರಿಸಲಿದ್ದೇವೆ. ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎಂಬ ನಂಬಿಕೆ ನನ್ನಲ್ಲಿದೆ, ಒಳ್ಳೆಯ ಕೆಲಸ ಮಾಡಿದರೆ‌ಮುಂದಿನ‌ದಿನಗಳಲ್ಲಿ ಆಶೀರ್ವಾದ ಮಾಡಿ ಎಂದು‌ ಜನರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಶಾಸಕ ಅಶೋಕ್ ರೈ ಗಳು ಪ್ರತಿಕ್ರಿಯೆ ನೀಡಿದ್ದು ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ‌ಇನ್ನಷ್ಟು ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version