Published
4 weeks agoon
By
Akkare Newsಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬಿಜಿಎಸ್ ಸಭಾಂಗಣದಲ್ಲಿ ನ.26 ರಂದು ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸುಳ್ಯ ತಾಲೂಕಿನ ಗುತ್ತಿಗಾರಿನ ಯುವ ಉದ್ಯಮಿ ದ.ಕ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿಆಶೀರ್ವಚನ ನೀಡಿದರು.
ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.