Published
4 weeks agoon
By
Akkare Newsಪುತ್ತೂರು : ನ 27,ಅರಿವು ಕೇಂದ್ರ ಗ್ರಾಮ ಪಂಚಾಯತು ಕೋಡಿಂಬಾಡಿ ಯಲ್ಲಿ ಸರಕಾರದ ಆದೇಶದಂತೆ 75ನೇ ವರ್ಷದ ಸಂವಿಧಾನ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಲಾಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ಇಲ್ಲಿಯ ಸುಮಾರು 25 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅರಿವು ಕೇಂದ್ರ ಮೇಲ್ವಿಚಾರಕಿ ಶ್ರೀಮತಿ ಕುಸುಮ ವಿ ರೈ ಇವರು ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿ ಹೇಳಿದರು, ಹಾಗೂ ಸಂವಿಧಾನದ ಮಹತ್ವವನ್ನು ತಿಳಿಸಲಾಯಿತು.
ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ , ರಸಪ್ರಶ್ನೆ ಸ್ಪರ್ಧೆ , ಭಾಷಣ ಸ್ಪರ್ಧೆ , ದೇಶ ಭಕ್ತಿ ಗೀತೆ , ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಸ್ಪರ್ಧೆಗಳನ್ನು ಗ್ರಂಧಾಲಯದಲ್ಲಿ ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳು , ಶಿಕ್ಷಕಿಯರು , ಪುನರ್ವಸತಿ ಕಾರ್ಯಕರ್ತೆ , ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರು , ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ,