Published
4 weeks agoon
By
Akkare Newsಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ.
ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್.ಐ.ಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್ ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಅದರಂತೆ ಕಲಂ 299 ಬಿಎನ್‌ಎಸ್ ಅಡಿ FIR ದಾಖಲಾಗಿತ್ತು. ಬುಧವಾರ(ನ.27) ಸಂಜೆ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ.
ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ‘ಅಲ್ಲಾ’ ಸಹಾಯಕ್ಕೆ ಬರಲಿಲ್ಲಾ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಬರೆದುಕೊಂಡಿದ್ದರು.