Published
3 weeks agoon
By
Akkare Newsಪ್ರಸ್ತುತ ರದ್ದಾಗಿರುವ ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದಂತೆ ಸುಲಿಗೆ ಆರೋಪದಡಿ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಅನ್ನು ದಾಖಲಿಸಿರುವುದನ್ನು ಕಟೀಲ್ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ತಡೆ ನೀಡಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು 2019 ಮತ್ತು 2023 ರ ನಡುವೆ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು. ಇದೇ ಪ್ರಕರಣದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರು ಪ್ರಕರಣದಲ್ಲಿ ಸಹ ಆರೋಪಿಗಳಾಗಿದ್ದಾರೆ. ಆದಾಗ್ಯೂ, ಸೀತಾರಾಮನ್ ಸೇರಿದಂತೆ ಇತರ ಆರೋಪಿಗಳು ಅದರ ವಿರುದ್ಧ ಇನ್ನೂ ಅರ್ಜಿಯನ್ನು ಸಲ್ಲಿಸದ ಕಾರಣ ನ್ಯಾಯಾಲಯವು ಎಫ್‌ಐಆರ್ ರದ್ದುಗೊಳಿಸುವಿಕೆಯನ್ನು ಕಟೀಲ್‌ಗೆ ಮಾತ್ರ ನಿರ್ಬಂಧಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.
ಕಂಪನಿಗಳಿಂದ ಹಣ ಸುಲಿಗೆ ಮಾಡಲು ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ರಾಜ್ಯ ಪೊಲೀಸರು ಸೆಪ್ಟೆಂಬರ್‌ನಲ್ಲಿ ನಳಿನ್ ಕಟೀಲ್, ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಸುಲಿಗೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಶಿಕ್ಷೆಗೆ ಸಂಬಂಧಿಸಿದಂತೆ ಅವರು ವಿರುದ್ಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಬೆಂಗಳೂರು ನ್ಯಾಯಾಲಯದ ನಿರ್ದೇಶನಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು.
ಸರ್ಕಾರೇತರ ಸಂಸ್ಥೆ ಜನಾಧಿಕಾರ ಸಂಘರ್ಷ ಪರಿಷತ್‌ನ ಕಾರ್ಯಕರ್ತ ಆದರ್ಶ್ ಆರ್ ಅಯ್ಯರ್ ಅವರ ದೂರಿನ ಮೇರೆಗೆ ಬೆಂಗಳೂರು ನ್ಯಾಯಾಲಯದ ಈ ನಿರ್ದೇಶನಗಳನ್ನು ನೀಡಿತ್ತು. ಬಿಜೆಪಿ ನಾಯಕ ನಳಿನ್
ನಿರ್ಮಲಾ ಸೀತಾರಾಮನ್ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಬಿಜೆಪಿಯ ಮುಖಂಡರು ಮತ್ತು ಪದಾಧಿಕಾರಿಗಳೊಂದಿಗೆ “ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ಮಾಡಿದ್ದು. ಈ ಮೂಲಕ ಅವರು 8,000 ಮತ್ತು ಅದಕ್ಕಿಂತ ಹೆಚ್ಚು ಕೋಟಿ ರೂ.ಗಳಷ್ಟುರೂ ಲಾಭ ಗಳಿಸಿದ್ದಾರೆ” ಎಂದು ಅಯ್ಯರ್ ದೂರಿನಲ್ಲಿ ಹೇಳಿದ್ದರು.