Published
3 weeks agoon
By
Akkare Newsಪ್ರತಿಭಟನೆಯೊಂದರ ವರದಿಗಾರಿಕೆ ಮಾಡಲು ಬಂದಂತಹ ಮಾಧ್ಯಮ ಮಿತ್ರರ ಮೇಲೆ ಹಿಂದೂ ಹಿಂದೂ ಸಂಘಟನೆಯ ಕಾರ್ಯಕರ್ತರು ಅಲ್ಲೇ ಮಾಡಿರುವಂತಹ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಹೌದು, ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಸಾಧು ಸಂತರ ನೆರವಿಗೆ ಆಗ್ರಹಿಸಿ ದ.ಕ.ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ (ಡಿ.4) ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವರದಿಗಾರಿಕೆಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಿದ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಪುಂಡಾಟಿಕೆ ಮೆರೆದ ಘಟನೆ ನಡೆದಿದೆ.
ಅಂದಹಾಗೆ ಧರಣಿ ವೇಳೆ ಪೊಲೀಸರು ಮತ್ತು ಹೋರಾಟಗಾರರ ನಡುವೆ ವಾಗ್ವಾದ ಶುರುವಾಗಿದೆ. ಧರಣಿನಿರತರು ಕ್ಲಾಕ್ ಟವರ್ ಬಳಿ ಪೊಲೀಸ್ ಬ್ಯಾರಿಕೇಡ್ ಗಳನ್ನು ಬದಿಗೊತ್ತಿ ರಸ್ತೆ ತಡೆಗೆ ಮುಂದಾಗಿದ್ದಾರೆ. ಆಗ ಮಧ್ಯಪ್ರವೇಶಿಸಿದ ಪೊಲೀಸರು ರಸ್ತೆ ತಡೆ ಮಾಡಲು ಯತ್ನಿಸಿದವರನ್ನು ತಡೆಯಲೆತ್ನಿಸಿದರು. ಇದು ಪೊಲೀಸರು ಮತ್ತು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿಗೆ ಕಾರಣವಾಯಿತು.
ಈ ವೇಳೆ ವರದಿಗಾರಿಕೆಗೆ ತೆರಳಿದ್ದ ಮಾಧ್ಯಮದವರ ಮೇಲೆ ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿ ವರದಿಗಾರಿಕೆಗೆ ಅಡ್ಡಿಪಡಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಗಳ ವಿಡಿಯೋ ಜರ್ನಲಿಸ್ಟ್ ಮೇಲೆ ಮುಗಿಬಿದ್ದ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ತಳ್ಳಾಡಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ್ದಾರೆ. ಹಲ್ಲೆಗೆ ಯತ್ನ ನಡೆದ ಹಿನ್ನೆಲೆಯಲ್ಲಿ ಮಾಧ್ಯಮದವರು ಧರಣಿಯ ವರದಿಗಾರಿಕೆಯನ್ನು ಬಹಿಷ್ಕರಿಸಿ ವಾಪಸ್ಸಾದರು.