Published
2 weeks agoon
By
Akkare Newsಪುತ್ತೂರು: ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಡಿ.6,7 ಹಾಗೂ 8 ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ನಡೆಯಲಿದೆ.
ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ.ಪುತ್ತೂರಿನಲ್ಲಿ 1978 ರಲ್ಲಿ ಆರಂಭಗೊಂಡ ಸಂಸ್ಥೆ ಆತಿಥ್ಯದಲ್ಲಿ ಸ್ಪರ್ಧೆ ನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ವಿಶೇಷ ಆಕರ್ಷಣೆಯಾಗಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.