Published
2 weeks agoon
By
Akkare Newsಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ, ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಮತ್ತೆ ಏರಿಕೆ ಮಾಡುವ ಸಾಧ್ಯತೆ ಇದೆ.
ಇದಕ್ಕೆ ಪುಷ್ಠಿ ನೀಡುವಂತೆ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್ಗೆ ಮನವಿ ಮಾಡಿವೆ. ಈ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.