ನಮ್ಮೊಂದಿಗೆ ಸಂಪರ್ಕ ಸಾಧಿಸಿ

ನಿಧನ

ಬ್ರೇಕಿಂಗ್ ನ್ಯೂಸ್ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

Published

on

ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

 

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

 

ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[೧] 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version