Published
2 weeks agoon
By
Akkare Newsಬೆಳಗಾವಿ : 2 ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹೋರಾಗರಾರ ಮೇಲೆ ಪೊಲೀಸರು ಲಾಠಿ ಬೀಸಿದ ಘಟನೆ ನಡೆದಿದೆ.
ಮೀಸಲಾತಿಗಾಗಿ ಆಗ್ರಹಿಸಿ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದ ಬಳಿ ಕೊಂಡಸಕೊಪ್ಪದ ಬಳಿ ಬೃಹತ್ ಪ್ರತಿಭಟನೆ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಪರಿಸ್ಥಿತಿ ಕೈಮೀರಿದ್ದು ಪ್ರತಿಭಟನಾಕಾರರು ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನಿಸಿದರು.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿದರು. ಈ ಸಂದರ್ಭದಲ್ಲಿ 20 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 10 ಸಾವಿರಕ್ಕೂ ಅಧಿಕ ಹೋರಾಟಗಾರು ಸುವರ್ಣಸೌಧ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.