Connect with us

ಇಂದಿನ ಕಾರ್ಯಕ್ರಮ

ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ2 ಕಾರ್ಯಕ್ರಮ

Published

on

ಪುತ್ತೂರು: ಡಿ.12.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ದೇಶ ಮತ್ತು ರಾಜ್ಯದಲ್ಲಿ ಒಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಮೂಡಿ ಬರುತ್ತಿದ್ದು, ವಿರೋಧ ಪಕ್ಷಗಳು ಮಾಡಬೇಕಾದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಸರಕಾರಗಳು ಕೆಲವೊಂದು ಜನವಿರೋಧಿ ಕಾರ್ಯಗಳನ್ನು ಮಾಡುವಾಗ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ನಿರ್ಲಕ್ಷ್ಯ ತೋರಿದಾಗ ವಿರೋಧ ಪಕ್ಷಗಳು ಮೌನವಹಿಸುತ್ತಿದ್ದು ರಾಜಕೀಯ ವ್ಯವಸ್ಥೆಯಲ್ಲಿ ಅಪಾಯಕಾರಿಯಾದ ಅಂಶವಾಗಿದೆ..

 

ಹಾಗಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ಆರಂಭ ಕಾಲದಿಂದಲೂ ಹೋರಾಟ ರಾಜಕೀಯವನ್ನು ಮಾಡಿಕೊಂಡು ಬರುತ್ತಿದ್ದು ಅದರ ಮುಂದುವರಿದ ಭಾಗವಾಗಿ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ 2 ಎಂಬ ಉಡುಪಿ ಯಿಂದ ಬೆಳಗಾವಿ ವರೆಗೆ 2024 ಡಿಸೆಂಬರ್ 10 ರಿಂದ 16ರ ವರೆಗೆ ಜಾಥಾ ವನ್ನು ಹಮ್ಮಿಕೊಂಡಿದ್ದು ಅದರ ಭಾಗವಾಗಿ ದಿನಾಂಕ 11-12-2024 ಬುಧವಾರದಂದು ಸಮಯ ಸಂಜೆ 6.00 ಗಂಟೆಗೆ ಉಪ್ಪಿನಂಗಡಿಯಲ್ಲಿ ಕಾಲ್ನಡಿಗೆ ಜಾಥಾ ಮತ್ತು ಸಭಾ ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರ್ ರವರು ಮಾತಾಡಿ ಪ್ರಸ್ತುತ ರಾಜ್ಯದಲ್ಲಿ ಸರಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಬಹುಪಾಲು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದು ಅದೇ ಸಮುದಾಯವನ್ನು ಮರೆತು ಜನವಿರೋಧಿ ಮತ್ತು ರಾಜಕೀಯ ಸೈದ್ದಾಂತಿಕತೆಯನ್ನು ಮರೆತು ಕೇವಲ ಸಂಘ ಪರಿವಾರದ ಕೈ ಗೊಂಬೆಯಾಗಿ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು..
2ಬಿ ಮೀಸಲಾತಿ ರದ್ದತಿ, ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಅನ್ಯಾಯ ಹೀಗೆ ಹಲವಾರು ವಿಚಾರಗಳ ಬಗ್ಗೆ ತಮ್ಮ ಭಾಷಣದಲ್ಲಿ ಬೆಳಕು ಚೆಲ್ಲಿದರು.

 

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ರವರು ಮಾತಾಡಿ ರಾಜ್ಯ ಸರ್ಕಾರದ ಕೆಲವೊಂದು ತಪ್ಪು ನಿಲುವುಗಳನ್ನು ಅತ್ಯಂತ ಸ್ಪಷ್ಟವಾಗಿ ವಿವರಿಸಿದರು..
ರಾಜ್ಯ ಸರಕಾದದಲ್ಲಿರುವ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 60 ಮಂದಿ ಶಾಸಕರನ್ನು ಅವರ ಅಸಮರ್ಥತೆಯನ್ನು ಪ್ರಶ್ನಿಸಿ ಮತ್ತು ಜನರನ್ನು ಅನ್ಯಾಯದ ವಿರುದ್ಧ ಮಾತನಾಡಲು ಪ್ರೇರೇಪಿಸುವಂತಹ ಅವರ ಕ್ರಾಂತಿಕಾರ ಹಾಡು ಇಡೀ ಕಾರ್ಯಕ್ರಮದ ಕೇಂದ್ರ ಬಿಂದುವಾಯಿತು.. ಈ ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಅಬ್ದುಲ್ ಮಜೀದ್ ಖಾನ್, ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಪುತ್ತೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದೀಕ್ ಕೆ ಎ, ಸುಳ್ಯ ವಿಧಾನ ಸಭಾ ಅಧ್ಯಕ್ಷ ಅಧ್ಯಕ್ಷರಾದ ರಝಾಕ್ ಕೆನರಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ತಲಪಾಡಿ ಯವರು ನಿರ್ವಹಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version