Published
1 week agoon
By
Akkare Newsಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯ ಸಚಿವರಿಂದ ಮಂಜೂರು
ಪುತ್ತೂರು : 2024-25 ನೇ ಸಾಲಿನಲ್ಲಿ ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ಹಾನಿಗೊಳಗಾದ ರಸ್ತೆ ಮೊದಲಾದವುಗಳು ದುರಸ್ತಿ, ಪುನರ್ ನಿರ್ಮಾಣ ಕಾಮಗಾರಿಗಳಿಗೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2 ಕೋ.ರೂ.ಅನುದಾನ ಬಿಡುಗಡೆಗೊಂಡಿದೆ.
ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆ ಸಚಿವರ ಅನುದಾನ ಮಂಜೂರು ಮಾಡಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ರಾಜ್ಯ ಹೆದ್ದಾರಿಗಳ ಪೈಕಿ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯ ಪುರುಷರಕಟ್ಟೆಯಲ್ಲಿ ಚರಂಡಿ ದುರಸ್ತಿಗೆ 6 ಲಕ್ಷ ರೂ., ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ದುರಸ್ತಿಗೆ 10 ಲಕ್ಷ ರೂ., ಅಮ್ಚಿನಡ್ಕ-ಕಾವು-ಈಶ್ವರಮಂಗಲ-ಪಲ್ಲತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ತಡೆಗೋಡೆ ನಿರ್ಮಾಣಕ್ಕೆ 24 ಲಕ್ಷ ರೂ., ಅಮ್ಚಿನಡ್ಕ-ಕಾವು-ಈಶ್ವರಮಂಗಲ-ಪಲ್ಲತ್ತೂರು ರಸ್ತೆಯಲ್ಲಿ ಪೆರ್ಲಂಪಾಡಿ ಬಳಿ ತಡೆಗೋಡೆ ನಿರ್ಮಾಣಕ್ಕೆ 30 ಲಕ್ಷ ರೂ., ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೋಡಿಂಬಾಡಿ ಬಳಿ ತಡೆಗೋಡೆ ನಿರ್ಮಾಣಕ್ಕೆ 75 ಲಕ್ಷ ರೂ., ಜಿಲ್ಲಾ ಮುಖ್ಯ ರಸ್ತೆಗಳಾದ ಮಾಡಾವು -ಸಿದ್ಧಮೂಲೆ -ಪಾಂಬಾರು -ಮಚ್ಚಿನಡ್ಕ ರಸ್ತೆಯಲ್ಲಿ ಸಿದ್ಧಮೂಲೆ ಬಳಿ ತಡೆಗೋಡೆ ನಿರ್ಮಾಣಕ್ಕೆ 10 ಲಕ್ಷ ರೂ., ಮಾಡಾವು -ಸಿದ್ಧಮೂಲೆ -ಪಾಂಬಾರು -ಮಚ್ಚಿನಡ್ಕ ರಸ್ತೆಯ ಹಲ್ಯಾಡಿ ಬಳಿ ತಡೆಗೋಡೆ ನಿರ್ಮಾಣಕ್ಕೆ 45 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಅಗತ್ಯ ಸ್ಪಂದನೆ
ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುದಾನಗಳು ಮಂಜೂರಾಗುತ್ತಿದೆ. ಈಗಾಗಲೇ ನಗರದ ರಸ್ತೆ ದುರಸ್ತಿ ಪ್ರಾರಂಭಗೊಂಡಿದ್ದು ಗ್ರಾಮಾಂತರ ಪ್ರದೇಶದ ಜಿಲ್ಲಾ, ರಾಜ್ಯ ಹೆದ್ದಾರಿಗಳ ದುರಸ್ತಿಗೆ 2 ಕೋ.ರೂ. ಅನುದಾನ ಬಿಡುಗಡೆಯಾಗಿದೆ. ಮುಂದಿನ ಹಂತದಲ್ಲಿ ಇನ್ನಷ್ಟು ಅನುದಾನ ಬರಲಿದ್ದು ಪುತ್ತೂರಿನ ತುರ್ತು ಅಗತ್ಯತೆಗಳಿಗೆ ತತ್‍ಕ್ಷಣ ಸ್ಪಂದನೆ ನೀಡುವ ಜತೆಗೆ ಉಳಿದ ಅಭಿವೃದ್ದಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.