ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಡಿ.14 ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜು ಕೃಷ್ಣಚೇತನ ಕಟ್ಟಡದಲ್ಲಿ ‘ಸಾವರ್ಕರ್ ಸಭಾಭವನ’ ಉದ್ಘಾಟನೆ

Published

on

ಡಿಸೆಂಬರ್ 14: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಕೃಷ್ಣಚೇತನ ಕಟ್ಟಡದಲ್ಲಿ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ.14ರಂದು ಮಧ್ಯಾಹ್ನ ಗಂಟೆ 12ಕ್ಕೆ ನಡೆಯಲಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

 

ಶಾಸಕ ಅಶೋಕ್‌ ಕುಮಾರ್ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಂ ಭಟ್ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಲಹಾ ಸಮಿತಿ ಸದಸ್ಯರಾಗಿರುವ ಸೇತುಭಂದು ಬ್ರಿಜ್‌ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪದ್ಮಶ್ರೀ ಗಿರೀಶ್ ಭಾರದ್ವಾಜ್‌ ಮತ್ತು ಸಲಹಾ ಸಮಿತಿ ಸದಸ್ಯರೂ ಮತ್ತು ಸ್ವಿಸ್ ಸಿಂಗಾಪುರ ಓವರ್‌ಸೀಸ್ ಎಂಟರ್‌ಪ್ರೈಸಸ್ ಸಿಂಗಾಪುರ ಇದರ ಮಾಜಿ ಅಧ್ಯಕ್ಷ ಚಂದ್ರಕಾಂತ್ ರಾವ್ ಐ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ.ಕೃಷ್ಣ ಭಟ್, ನಿರ್ದೇಶಕ ಬಲರಾಮ ಆಚಾರ್ಯ ಜಿ, ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ. ಕೃಷ್ಣಚೇತನ ಕಟ್ಟಡದ ಹೊರ ಭಾಗದಿಂದ ಸಭಾಂಗಣಕ್ಕೆ ತೆರಳಲು ಪ್ರತ್ಯೇಕ ವ್ಯವಸ್ಥೆ ಮತ್ತು ಸುಮಾರು 500 ಮಂದಿ ಆಸನದ ವ್ಯವಸ್ಥೆಯುಳ್ಳ ಸಭಾಭವನವು ಸಂಪೂರ್ಣ ಹವಾನಿಯಂತ್ರಣವನ್ನು ಅಳವಡಿಸಲಾಗಿದೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳಲ್ಲಿ ಕರಾವಳಿ ಕರ್ನಾಟಕದ ಉತ್ತಮ ತಾಂತ್ರಿಕ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿರುವ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯೂ ಒಂದು. ಆರು ಪದವಿ ವಿಭಾಗಗಳು ಮತ್ತು ಎರಡು ಸ್ನಾತಕೋತ್ತರ ವಿಭಾಗಳಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿಗಳು ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿ ವರ್ಷವೂ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್‌ ನೇಮಕಾತಿಯ ಮೂಲಕ ಪ್ರತಿಷ್ಠಿತ ಕಂಪೆನಿಗಳಲ್ಲಿ ಹುದ್ದೆ ಪಡೆಯುತ್ತಿದ್ದಾರೆ ಎಂದರು.

 

 

ಇದೆ ಸಂದರ್ಭದಲ್ಲಿ ದಿ.ಜಿ.ಎಲ್.ಆಚಾರ್ಯ ಅವರ 100ನೇ ಜನ್ಮದಿನಾಚರಣೆಯ ಸವಿ ನೆನಪಿನಲ್ಲಿ ಕಾಲೇಜಿನ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಕಾರಂಜಿಯನ್ನು ಜಿ.ಎಲ್.ಬಲರಾಮ ಅಚಾರ್ಯ ಅವರು ಕಾಲೇಜಿಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಸುಬ್ರಹ್ಮಣ್ಯ ಭಟ್ ಟಿ.ಎಸ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಕಾಲೇಜಿನ ಕೋಶಾಧಿಕಾರಿ ಮುರಳೀಧರ ಭಟ್, ನಿರ್ದೇಶಕ ರವಿಕೃಷ್ಣ ಡಿ ಕಲ್ಲಾಜೆ, ಪ್ರಾಂಶುಪಾಲ ಡಾ. ಮಹೇಶ್‌ಪ್ರಸನ್ನ ಕೆ, ಮಾಧ್ಯಮ ವಿಭಾಗದ ಸಹ ಸಂಯೋಜಕ ಹರಿಪ್ರಸಾದ್ ಡಿ ಉಪಸ್ಥಿತರಿದ್ದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement