ನಮ್ಮೊಂದಿಗೆ ಸಂಪರ್ಕ ಸಾಧಿಸಿ

ನಿಧನ

ವಿಶ್ವ ವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Published

on

ವಿಶ್ವವಿಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ (73) ಅವರು ಭಾನುವಾರ ಅಮೆರಿಕದಲ್ಲಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಭಾರತ ಸೇರಿದಂತೆ ವಿದೇಶಗಳಲ್ಲಿ ಕೂಡ ಹೆಸರು ಗಳಿಸಿದ್ದರು. ಹಲವಾರು ಹಾಲಿವುಡ್ ಚಿತ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.

 

ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್​, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಮಾರ್ಚ್ 9, 1951 ರಂದು ಮುಂಬೈನಲ್ಲಿ ಜನಿಸಿದ ಜಾಕಿರ್ ಹುಸೇನ್, ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದವರು. ಅವರ ತಂದೆಯ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಜಾಕಿರ್ ಹುಸೇನ್​​ ಅಸಾಧಾರಣ ಪ್ರತಿಭೆಯಾಗಿ ಹೊರಹೊಮ್ಮಿದರು.

ಸಿಎಂ ಸಿದ್ದರಾಮಯ್ಯ ಸಂತಾಪ 

ಜಾಕೀರ್ ಹುಸೇನ್ ವಿಧಿವಶಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಸಂತಾಪ ಸೂಚಿಸಿದ್ದು, ಅವರ ಸಾವಿನ ಸುದ್ದಿ ತಿಳಿದ ತಿಂಬಾ ನೋವಾಗಿದೆ. ತಬಲದ ಅವರ ಲಯದಿಂದಲೇ ಗಡಿಯಾಚೆಗಿನ ಹೃದಯ ಒಂದುಗೂಡಿಸುತ್ತಿದ್ದರು. ಭಾರತೀಯ ಶಾಸ್ತ್ರೀಯ ಸಂಗೀತಕ್ಕೆ ಅವರ ಕೊಡುಗೆ ಅಪಾರ ಎಂದಿದ್ದಾರೆ.

ಸದಸ್ಯರಾಗಿ ಮುನೀರ್, ನಮಿತಾ, ರಮೇಶ್, ಷೆರೀಫಾ, ಅಸ್ಮಾ, ವಸಂತಿ, ಉಷಾ, ಸೀತಾ, ಮೀನಾಕ್ಷಿ‌, ರೇಖಾ, ಚಂದ್ರಲೇಖ, ಆಶಾಲತಾ, ಹೊನ್ನಮ್ಮ, ಸಾಜಿದಾ, ಮರಿಯಮ್ಮ,‌ಜುನೈದಾ, ಸಲೀಂ ಮತ್ತು ಹಸೀನಾ ಅವರನ್ನು ಆಯ್ಕೆ ಮಾಡಿದ ಬಳಿಕ ಅಧ್ಯಕ್ಷರಾಗಿ ಮುನೀರ್ ಹಾಗೂ ಉಪಾಧ್ಯಕ್ಷರಾಗಿ ನಮಿತಾ ಅವರನ್ನು ಆಯ್ಕೆ ಮಾಡಲಾಯಿತು. ಶಾಲಾ‌ ಶಿಕ್ಷಕ ವೃಂದ ಮತ್ತು ಪೋಷಕರು ಉಪಸ್ಥಿತರಿದ್ದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement