Published
6 days agoon
By
Akkare News
ಸತಾರಾ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಧನಂಜಯ್ ನಿಖಮ್ ಅವರ ಪರವಾಗಿ ಕಿಶೋರ್ ಖರತ್ ಮತ್ತು ಆನಂದ್ ಖರತ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವಿಷಯವನ್ನು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳ ಖಚಿತಪಡಿಸಿದೆ.
ಜಾಮೀನು ಮಂಜೂರು ಮಾಢಬೇಕಿದ್ದರೆ 5 ಲಕ್ಷ ರೂ.ಗಳನ್ನು ನೀಡಬೇಕು ಎಂದು ನ್ಯಾಯಾಧೀಶ ಧನಂಜಯ್ ಅವರು ಇಬ್ಬರು ಖಾಸಗಿ ವ್ಯಕ್ತಿಗಳ ಮೂಲಕ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮಹಿಳೆ ಎಸಿಬಿಗೆ ದೂರು ನೀಡಿದ್ದರು.
ಲಂಚಕ್ಕೆ ಬೇಡಿಕೆ ಇಟ್ಟಿರುವುದು ದೂರಿನ ಪರಿಶೀಲನೆ ಬಳಿಕ ತಿಳಿದುಬಂದಿದೆ. ಹಾಗಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸತಾರಾ ಹೊಟೇಲ್ನಲ್ಲಿ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿ ನ್ಯಾಯಾಧೀಶರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿತರನ್ನು ಬಂಧಿಸಲಾಗಿದೆ. ಈ ಘಟನೆ ನ್ಯಾಯಾಲಯದ ಆವರಣದಲ್ಲಿ ನಡೆದಿರುವುದು ಗಮನಾರ್ಹವಾಗಿದೆ.