Published
6 days agoon
By
Akkare Newsಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ.
ಜನವರಿ 1ರಿಂದ ಮಾರ್ಚ್ 15ರವರೆಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಕಣ್ಮನ ಸೆಳೆಯುವ ಜೋಗ ಜಲಪಾತ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಶೈಕ್ಷಣಿಕ ಪ್ರವಾಸಕ್ಕಾಗಿ ಶಾಲಾ-ಕಾಲೇಜು ಮಕ್ಕಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜೋಗ ಜಲಪಾತಕ್ಕೆ ಬರುವುದು ಸಾಮಾನ್ಯ.ಆದರೆ ಜೋಗ ಜಲಪಾತದ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ 74 ದಿನಗಳವರೆಗೆ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.