Published
5 days agoon
By
Akkare Newsಪುತ್ತೂರು:ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಕೃಷ್ಣಪ್ರಸಾದ್ ಆಳ್ವ ಅವರು ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಹಾಗೂ ಇರ್ದೆ ಉಪ್ಪಳಿಗೆ ಪ್ರೌಢಶಾಲಾ ಎಸ್‌ಡಿಎಂಸಿ ಕಾರ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಶಾಸಕ ಅಶೋಕ್ ರೈಯವರಿಗೆ ಸಲ್ಲಿಸಿದ್ದಾರೆ.
ಪಕ್ಷದ ಅಧ್ಯಕ್ಷನಾಗಿ ಪಕ್ಷವನ್ನು ಸಂಘಟಿಸುವುದು, ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದು, ಒಬ್ಬರಿಗೆ ಒಂದೇ ಹುದ್ದೆ ಹಾಗೂ ಹುದ್ದೆಯನ್ನು ಎಲ್ಲರಿಗೂ ಹಂಚುವ ನಿಟ್ಟಿನಲ್ಲಿ ರಾಜಿನಾಮೆ ಸಲ್ಲಿಸಿರುವುದಾಗಿ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.