ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮುಹಮ್ಮದ್ ಶರೀಫ್(55) ಎಂದು ತಿಳಿದು ಬಂದಿದೆ.
ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್ ಪೋರ್ಟ್‌ನಲ್ಲಿ ಮೊಹಮ್ಮದ್ ಶರೀಫ್ ಬಂಧಿಸಿದ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಈತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಎರಡು ಬಾರಿ ಎನ್‌ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು ಎಂದು ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.