ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Published

on

ಬೆಳಗಾವಿ :ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

 

ಸುವರ್ಣ ವಿಧಾನಸೌಧಕ್ಕೆ ಬುಧವಾರ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾತನಾಡಿ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಬದುಕಿನ ಅವಕಾಶಗಳ ಸೃಷ್ಟಿಸಿಕೊಂಡ 25ಕ್ಕೂ ಹೆಚ್ಚು ಮಂದಿ ಫಲಾನುಭವಿಗಳ ಭೇಟಿಯಾಗಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ.

 

ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯ ಸಾಕಾರಗೊಳಿಸಿದ ನನಗೆ, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದ್ದಾರೆ. ಈ ಎಲ್ಲರ ಮಾತುಗಳು ಕೇಳಿ ಸಂತೃಪ್ತ ಭಾವ ನನ್ನಲ್ಲಿ ಮೂಡಿದೆ. ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು.

ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆ ಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಯಿಂದ ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆ ಮುಂದುವರಿಸಲಿದ್ದೇವೆ ಎಂದು ಹೇಳಿದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version