ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಟಿ ರವಿ ವಿರುದ್ಧ ಎಫ್ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿದೆ.