Published
2 days agoon
By
Akkare Newsಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ. ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ. ಇನ್ಜು ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದು. ಅಪಘಾತದ ಭೀಕರತೆ ಹೇಗಿದೆ ಎನ್ನುವುದನ್ನು ಫೋಟೋಗಳೇ ಹೇಳುತ್ತವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.
ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ.
ಈ ಭೀಕರ ಅಪಘಾತ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.ಇನ್ನು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ಸಂಪೂರ್ಣ ಅಪ್ಪಚ್ಚಿಯಾಗಿರುವ ಕಾರು ಬೆಂಗಳೂರು ರಿಜಿಸ್ಟ್ರೇಷನ್ ಹೊಂದಿದ್ದು, ಮೃತ ಆರು ಜನರು ವಿಜಯಪುರ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಆದ್ರೆ, ನಿಖರವಾಗಿ ಅವರ ಹೆಸರು ಸೇರಿದಂತೆ ವಿವರ ತಿಳಿದುಬರಬೇಕಿದೆ.