Published
1 day agoon
By
Akkare Newsಪುತ್ತೂರು: ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಮೂವರು ಸರಗಳ್ಳಿಯರನ್ನ ಪುತ್ತೂರು ನಗರಠಾಣಾ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲಿನ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ರಾಜಾಜಿನಗರ ಮೂಲದ ನಿವಾಸಿಗಳಾದ ಜ್ಯೋತಿ ಹಾಗೂ ಯಶೋಧ ಎಂಬ ಇಬ್ಬರು ಕಳ್ಳಿಯರನ್ನ ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳಿಂದ ಸುಮಾರು 25 ಸಾವಿರ ಮೌಲ್ಯದ ಚಿನ್ನಾಭರಣವನ್ನ ವಶಪಡಿಸಿಕೊಳ್ಳಲಾಗಿದೆ.
ಇನ್ನು ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು 3 ಚಿನ್ನದ ಉಂಗುರವನ್ನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ನೀರುಮಾರ್ಗ ನಿವಾಸಿ ವಿದ್ಯಾ ಎಂಬವಳನ್ನ ಬಂಧಿಸಲಾಗಿದೆ. ಆರೋಪಿಯಿಂದ ಸುಮಾರು 77 ಸಾವಿರ ಮೌಲ್ಯದ ಚಿನ್ನಾಭರಣವನ್ನ ವಶಪಡಿಕೊಳ್ಳಲಾಗಿದೆ.