ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ರೈನ್ ಅಪ್ಡೇಟ್ : ವಾಯುಭಾರ ಕುಸಿತ! ನಾಳೆಯಿಂದ ಮತ್ತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Published

on

ಆಂಧ್ರಪ್ರದೇಶ  ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ  ಮೇಲಿನ ವಾಯುಭಾರ ಕುಸಿತ  ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ನಾಳೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ

ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ.

ಮುಂದಿನ ಎರಡು ದಿನಗಳವರೆಗೂ ಈ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ

ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ ಹಾಗೂ 18 ಡಿಗ್ರಿ ಸೆಲ್ಸಿಯಸ್‌ ಇರಬಹುದು. ಮುಂದಿನ ಎರಡು ದಿನಗಳವರೆಗೂ ಈ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವೇ ಇರಲಿದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ನಷ್ಟು ಕಂಡುಬರಲಿದೆ ಎಂದು ಹೇಳಿದೆ.

ರಾಜ್ಯದಾದ್ಯಂತ ಒಣ ಹವೆ ಜೊತೆಗೆ ಭಾರಿ ಮಳೆ

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡುಬರಲಿದೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಹಲವು ಕಡೆ ದಟ್ಟ ಮಂಜು ಇರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಒಣ ಹವೆ ಜೊತೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement