Published
3 hours agoon
By
Akkare Newsಬೆಳಗಾವಿ, ಡಿ.23: ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಸಿ.ಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು.
ಖಾನಾಪುರ ಪೊಲೀಸ್ ಠಾಣೆಗೆ ಸಿ.ಟಿ ರವಿ ಲಿಖಿತ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಹಿರೇಬಾಗೇವಾಡಿ ಠಾಣೆಗೆ ವರ್ಗಾವನೆ ಮಾಡಲಾಗಿತ್ತು. ಭಾನುವಾರ ಸಿ.ಟಿ ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿಯು ಪೋಸ್ಟ್ ಮೂಲಕ ಪೊಲೀಸರಿಗೆ ಬಂದು ತಲುಪಿದ ಬೆನ್ನಲ್ಲೇ ಬೆಳಗಾವಿ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.