Published
13 hours agoon
By
Akkare Newsಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಕಂಬಳಕ್ಕೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಅವರು ಕೂಡ ಕಂಬಳಕ್ಕೆ ಸರ್ಕಾರ ನೆರವು ನೀಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಗುಡುಗಿದ್ದರು.
ಅಶೋಕ್ ಕುಮಾರ್ ರೈ ಮತ್ತು ಯುಟಿ ಖಾದರ್ ಹೇಳಿಕೆ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಸರ್ಕಾರ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್‌ಕೆ ಪಾಟೀಲ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. 2024-25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ನೀಡುವುದಾಗಿ ಸರ್ಕಾರ ಘೋಷಿಸಿದೆ.
ಕಂಬಳಕ್ಕೆ ನೆರವು ನೀಡುವ ಮೂಲಕ ಬೆಂಬಲವಾಗಿ ನಿಂತ ರಾಜ್ಯ ಸರ್ಕಾರಕ್ಕೆ ಕಂಬಳ ಸಮಿತಿ ಅಭಿನಂದನೆ.