ಹೊಸದಿಲ್ಲಿ ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರ ಎಂದು ವರದಿಯಾಗಿದೆ.
92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆತರಲಾಯಿತು. ಆಸ್ಪತ್ರೆಗೆ ದಾಖಲಿಸಿದ ಕಾರಣ ತಿಳಿದುಬಂದಿಲ್ಲ. ಅವರ ಕುಟುಂಬ ಮತ್ತು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ತಲುಪಿದ್ದಾರೆ.