ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮೊಬೈಲ್ ಕೊಡದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Published

on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವತಿ ಧನುಶ್ರೀ (20) ಎಂದು ತಿಳಿದು ಬಂದಿದೆ. 
 
ಕಳೆದ ಸೋಮವಾರ ಸಂಜೆ 7.30 ಗೆ ಕಾಲೇಜು ಮುಗಿಸಿ ಮನೆಗೆ ಬಂದಾಗ ಘಟನೆ ನಡೆದಿದೆ.

ಮೊಬೈಲ್ ಹಾಗೂ ಟಿವಿ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

 

 

ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
 
ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement