ನಮ್ಮೊಂದಿಗೆ ಸಂಪರ್ಕ ಸಾಧಿಸಿ

ನಿಧನ

ಬಿಗ್ ಬ್ರೇಕಿಂಗ್ ನ್ಯೂಸ್ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

Published

on

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಇಂದು ರಾತ್ರಿ(ಡಿ.26) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ‌ ಎಂದು ಮೂಲಗಳು ತಿಳಿಸಿವೆ.

ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ 10 ವರ್ಷಗಳ ಕಾಲ ಭಾರತದಲ್ಲಿ ಆಡಳಿತ ನಡೆಸಿದ್ದಾರೆ, ಆರ್ಥಿಕ ತಜ್ಞರಾಗಿಯು ಸೇವೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ಅನ್ನೋ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.

ಮನಮೋಹನ್‌ ಸಿಂಗ್ ಅವರು ಚಂಡೀಗಢದ ವಿಶ್ವವಿದ್ಯಾಲಯ ಮತ್ತು ಗ್ರೇಟ್‌ ಬ್ರಿಟನ್‌ ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಗಳ ಸರಣಿಗೆ ಹೆಸರುವಾಸಿಯಾಗಿದ್ದರು. ಮನಮೋಹನ್‌ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕರಾಗಿ (1976-80) ಹಾಗೂ ಆರ್‌ಬಿಐ ಗವರ್ನರ್ (1982-85) ಸೇವೆ ಸಲ್ಲಿಸಿದ್ದಾರೆ.

 

 

ಮೇ 2009 ರ ಸಂಸತ್ತಿನ ಚುನಾವಣೆಯಲ್ಲಿ ಎರಡನೇ ಬಾರಿ ಪ್ರಧಾನ ಮಂತ್ರಿಯಾದರು. 2014ರ ಲೋಕಾಸಭೆ ಚುನಾವಣೆಗೂ ಮುನ್ನ ನಾನು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗೋದಿಲ್ಲ ಅಂತ ಹೇಳಿದ್ದರಂತೆ. ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್‌ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಆರ್ಥಿಕ ಚತುರ ಅಂತಲೇ ಎಲ್ಲರೂ ಕರೆಯುತ್ತಿದ್ದರು. ಆದರೆ ವಯೋಸಹಜ ಕಾಯಿಲೆಯಿಂದ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version