Published
16 hours agoon
By
Akkare Newsಕೊರೆಯುವ ಚಳಿಯ ನಡುವೆ ರಾಜ್ಯದಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರದಿಂದಲೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಹಿಂಗಾರು ಮಳೆ ಮಾರುತಗಳ ಪ್ರಭಾವದಿಂದ ಮೂರು ದಿನಗಳಿಂದ ಬೆಂಗಳೂರು ಸೇರಿ ವಿವಿಧೆಡೆ ಮೋಡ ಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆ ಮುಂದುವರೆಯಲಿದೆ
ಬೆಂಗಳೂರು, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ ಚಳಿಯ ಜೊತೆಗೆ ಮಳೆಯಾಗುತ್ತಿದ್ದು ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ.