Published
17 hours agoon
By
Akkare Newsಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ.
ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಂಬಲಪಾಡಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಮೇಲ್ಸೇತುವೆ ನಿರ್ಮಾಣವಾಗುತ್ತಿರುವ ಸ್ಥಳದ ಸುತ್ತಲೂ ಸಾಕಷ್ಟು ಬ್ಯಾರಿಕೇಡ್‌ಗಳು ಮತ್ತು ಎಚ್ಚರಿಕೆ ಫಲಕಗಳಿಲ್ಲದಿರುವುದು ಈ ಅಪಘಾತಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಸುರಕ್ಷತಾ ಕ್ರಮಗಳು ಇಲ್ಲದಿರುವ ಕಾರಣ ಜನರು ಕಳವಳ ವ್ಯಕ್ತಪಡಿಸಿದ್ದಾರೆ.