Published
3 days agoon
By
Akkare NewsKarnataka Rains: ಇದೀಗ ಭೀಕರ ಚಳಿ ನಡುವೆಯೂ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 3 ದಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗು ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 29) ಬೆಳಗ್ಗೆಯಿಂದಲೂ ಮೋಡ ಮಂಜಿನ ಜೊತೆ ಮೋಡ ಕವಿದ ವಾತಾವರಣ ಇದ್ದು, 9 ಗಂಟೆ ವೇಳೆಗೆ ಸೂರ್ಯ ಎಂಟ್ರಿ ಕೊಟ್ಟಿದ್ದಾನೆ. ಇನ್ನು ಸಂಜೆ ಅಥವಾ ರಾತ್ತಿ ವೇಳಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಹಲವು ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಅಂದರೆ ಡಿಸೆಂಬರ್ 29ರಿಂದ ಮೂರು ದಿನ ರಾಜ್ಯದ ಹಲವೆಡೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Weather Forecast: ಈ ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಜನವರಿ 6ರ ವರೆಗೆ ಭಾರೀ ಮಳೆ ಮುನ್ಸೂಚನೆ
ಇನ್ನು ಇಂದು (ಡಿಸೆಂಬರ್ 29) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಜೂನ್ ಆರಂಭವಾಗುತ್ತಿದ್ದಂತೆ ಕರ್ನಾಟಕಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟು ದೊಡ್ಡ ಅವಾತಂರಗಳನ್ನೇ ಸೃಷ್ಟಿಸಿತ್ತು. ಈ ವೇಳೆ ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾದ ಘಟನೆಗಳು ಕೂಡ ನಡೆದಿವೆ.
ಮತ್ತೊಂದೆಡೆ ಮಳೆರಾಯ ಬರವನ್ನೆಲ್ಲ ನೀಗಿಸಿದನಲ್ಲ ಅಷ್ಟು ಸಾಕು. ಆದರೆ ನಷ್ಟ ಪರಿಹಾರದ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಈ ಬಾರಿ ಭಾರೀ ಮಳೆಯಿಂದ ಉತ್ತಮ ಬೆಳೆಗಳೇನೋ ಬಂದಿವೆ. ಆದರೆ, ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಕಾಟದಿಂದ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಲೇ ಇದ್ದಾರೆ. ಇದಕ್ಕೂ ಕೂಡ ಸರ್ಕಾರವೇ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಂತಲೂ ಕೂಡ ರೈತರು ಆಗ್ರಹಿಸುತ್ತಿದ್ದಾರೆ.