Published
4 days agoon
By
Akkare Newsಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದ ಸರಕಾರ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ಸಾರಿಗೆ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಕರೆನೀಡಿತ್ತು. ಆದರೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ಬಳಿಕ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ. ಹೀಗಾಗಿ ಡಿ.31ರಂದು ಎಂದಿನಂತೆ ಸಾರಿಗೆ ಸಂಸ್ಥೆ ಬಸ್ಗಳು ರಸ್ತೆಗಿಳಿಯಲಿವೆ.
38 ತಿಂಗಳ ಎರಿಯರ್ಸ್ ಬಿಡುಗಡೆ ಮಾಡಬೇಕು ಮತ್ತು 2024ರ ಜನವರಿಯಿಂದ ವೇತನ ಹೆಚ್ಚಳ ಮಾಡಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ಅನಂತ್ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ ನಾಲ್ಕು ನಿಗಮದ ಬಸ್ಸುಗಳ ಸಂಚಾರ ನಿಲ್ಲಿಸಿ ಮುಷ್ಕರ ಹೂಡಲು ಸಿದ್ಧತೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು. ಬಳಿಕ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದ ನಿರ್ಧಾರ ಪ್ರಕಟಿಸಿದೆ.