Connect with us

ಇತರ

ಹೊಸ ವರ್ಷಕ್ಕೆ ರಾಜ್ಯದಲ್ಲಿ `ಮದ್ಯ’ದ ಹೊಳೆ : ನಿನ್ನೆ ಒಂದೇ ದಿನ ಭರ್ತಿ 308 ಕೋಟಿ ರೂ. `ಮದ್ಯ’ ಸೇಲ್.!

Published

on

ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.

ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿದೆ.

 

2023 ರ ಡಿಸೆಂಬರ್ 31 ರಂದು 193 ಕೋಟಿ ರೂ. ಮದ್ಯ ಮರಾಟ ಮಾಡಲಾಗಿತ್ತು. 2,92,339 ಬಿಯರ್ ಬಾಕ್ಸ್ ಮಾರಾಟದಿಂದ 57.75 ಕೋಟಿ ರೂ. ಒಟ್ಟು 7,76,042 ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ ರೂ. ಬಂದಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 28ರ ಶನಿವಾರ 408.53 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಡಿಸೆಂಬರ್ 27ರಂದು ರಜೆ ಘೋಷಣೆ ಮಾಡಿದ್ದರಿಂದ ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ರಾಜ್ಯಾದ್ಯಂತ ಡಿ. 28ರಂದು 6,22,062 ಕೇಸ್ ವಿಸ್ಕಿ ಮತ್ತು ಇತರ ಸ್ಪಿರಿಟ್ ಖರೀದಿ ಮಾಡಲಾಗಿದೆ. 4,04,998 ಕೇಸ್ ಬಿಯರ್ ಸೇರಿದಂತೆ 10,27,060 ಕೇಸ್ ಮದ್ಯ ಮಾರಾಟ ಆಗಿದೆ. ಇದರಲ್ಲಿ 80.58 ಕೋಟಿ ಮೊತ್ತದ ಬಿಯರ್ ಇದ್ದರೆ, 327,50 ಕೋಟಿ ಮೌಲ್ಯದ ಸ್ಪಿರಿಟ್ಸ್ ಮಾರಾಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement