Published
3 days agoon
By
Akkare Newsಪುತ್ತೂರು:ಉಪ್ಪಿನಂಗಡಿ ಮಾದರಿಉನ್ನತ ಹಿ ಪ್ರಾ ಶಾಲಾ ವಾರ್ಷಿಕೋತ್ಸವ ಜ.4 ರಂದುಶಾಲಾ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಉದ್ಘಾಟನೆ ಮಾಡಲಿದ್ದು, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ದ್ವಜಾರೋಹಣ ನೆರವೇರಿಸಲಿದ್ದಾರೆ.ಉಪ್ಪಿನಂಗಡಿ ಗ್ರಾಪಂ ಅಧ್ಯಕ್ಷೆ ಲಲಿತಾ ಅಧ್ಯಕ್ಷತೆ ವಹಿಸಲಿದ್ದಾರೆ.
ಅಪರಾಹ್ನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಉಪ್ಪಿನಂಗಡಿ ಗ್ರಾಪಂ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ.ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರುಭಾಗವಹಿಸಲಿದ್ದಾರೆ.