Published
2 days agoon
By
Akkare Newsಸಿಲಿಕಾನ್ ಸಿಟಿ ಬೆಂಗಳೂರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡುವ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಾಗೂ ಸಚಿವ ಶರಣ್ ಪ್ರಕಾಶ್ ಪಾಟೀಲ್,ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್,ಡಿಜಿ ಮತ್ತು ಐಜಿ ಅಲೋಕ್ ಮೋಹನ್, ಕಮಿಷನರ್ ದಯಾನಂದ್, ಬೆಂಗಳೂನಗರ ಡಿಸಿ ಜಗದೀಶ್ ಸ್ವಾಗತ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ.
ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ನಿಮ್ಹಾನ್ಸ್ ಕಾರ್ಯಕ್ರಮ ಮುಗಿಸಿ HAL ಏರ್‌ಪೋರ್ಟ್‌ಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2-20ಕ್ಕೆ HAL ಏರ್ಪೋರ್ಟ್ ನಿಂದ ಬೆಳಗಾವಿಗೆ ತೆರಳಲಿದ್ದಾರೆ. ಮದ್ಯಾಹ್ನ 3-55ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ ನಿಲ್ದಾಣದಂದ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ 5-30ಕ್ಕೆ ಬೆಳಗಾವಿ ಏರ್‌ಪೋರ್ಟ್‌ನಿಂದ ದೆಹಲಿಗೆ ವಾಪಾಸ್ಸಾಗಲಿದ್ದಾರೆ.