Published
1 day agoon
By
Akkare Newsದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು.
ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು.
ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ “ಪ್ಯಾರಿ ದೀದಿ ಯೋಜನೆ” ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ” ಎಂದು ಹೇಳಿದರು.
“ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ ಅಂದರೆ 1924ರ ಡಿ.26 ರಂದು ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಅದರ ಶತಮಾನೋತ್ಸವವನ್ನು ನಾವು ಇತ್ತೀಚೆಗಷ್ಟೇ ಆಚರಿಸಿದ್ದೇವೆ. ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಾಗದಲ್ಲಿ ಇರುವ ಬಾವಿಯಲ್ಲಿನ ನೀರು ತೆಗೆದುಕೊಂಡು ಸಿದ್ದರಾಮಯ್ಯ ಅವರು ಸೇರಿದಂತೆ ನಮ್ಮ ಪಕ್ಷದ ನಾಯಕರು ಅಲ್ಲಿನ ಜಾಗವನ್ನು ಸ್ವಚ್ಛ ಮಾಡಿ ಕರ್ನಾಟಕ ರಾಜ್ಯವನ್ನು ಭ್ರಷ್ಟ ಸರ್ಕಾರದಿಂದ ಮುಕ್ತಗೊಳಿಸುವ ಪಣತೊಟ್ಟೆವು. ಇದೇ ಸಂದರ್ಭದಲ್ಲಿ ನಮ್ಮ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿಯನ್ನು ಘೋಷಣೆ ಮಾಡಲಾಯಿತು.
ನಂತರ ಗೃಹಲಕ್ಷ್ಮಿ ಯೋಜನೆಯನ್ನು ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಇದು ಕೇವಲ ಭರವಸೆಯಾಗಬಾರದು. ಈ ಯೋಜನೆ ಜಾರಿ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಬೇಕು ಎಂದು ಹೇಳಿದರು. ಹೀಗಾಗಿ ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಂತರ ಸರ್ಕಾರ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಲಾಯಿತು.
ಮೊದಲ ಮೂರು ತಿಂಗಳಲ್ಲಿ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟೆ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ” ಎಂದರು ಹೇಳಿದರು.
ರ್ಥ್ಯಗಳ ಮೇಲೆ ನಡೆಯುತ್ತಿವೆ” ಎಂದು ಉತ್ತರಿಸಿದರು