Published
22 hours agoon
By
Akkare Newsಪುತ್ತೂರು:(ಜ.7) ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯೊಂದಿಗೆ ಕಾಮುಕನೊಬ್ಬ ಆಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜದಲ್ಲಿ ನಡೆದಿದೆ.
ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಶೀರ್ ಎಂದು ತಿಳಿದು ಬಂದಿದೆ.
ಕಾಮುಕ ಬಶೀರ್ ಮೊದಲಿಗೆ ಮಹಿಳೆಗೆ ಡ್ಯಾಶ್ ಹೊಡೆದಿದ್ದಾನೆ. ನಂತರ ಆಕೆಯನ್ನು ಮನೆ ತನಕ ಹಿಂಬಾಲಿಸಿ, ಮನೆಯ ಎದುರುಭಾಗದಲ್ಲೇ ಮರ್ಮಾಂಗವನ್ನು ತೋರಿಸಿ,ಆಶ್ಲೀಲವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.
ಈ ವೇಳೆ ಮಹಿಳೆಯು ಜೋರಾಗಿ ಕಿರುಚಿಕೊಂಡಿದ್ದಾಳೆ. ಅಷ್ಟರಲ್ಲಿ ಅಕ್ಕಪಕ್ಕದ ಮನೆಯವರು ಆಗಮಿಸಿ, ಕಾಮುಕ ಬಶೀರನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದು ತಕ್ಷಣ ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಬಶೀರ್ ಈ ಮೊದಲು ಕೂಡ ಹೋಗೋ ಬರೋ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.