ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಜಾರಿ

Published

on

ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರಿಗೆ ಸಾರಿಗೆ ಇಲಾಖೆ ಹೊಸ ವರ್ಷದ ಗಿಫ್ಟ್ ನೀಡಿದೆ. ನೌಕರರ 20 ವರ್ಷಗಳ ಬೇಡಿಕೆಯಾಗಿದ್ದ ನಗದು ರಹಿತ ಚಿಕಿತ್ಸಾ ಯೋಜನೆಗೆ ‘ಕೆಎಸ್‌ಆರ್‌ಟಿಸಿ ಆರೋಗ್ಯ’ ಇಂದು ಚಾಲನೆ ಸಿಕ್ಕಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.


 

ಈ ಯೋಜನೆ ಅಡಿ ನೌಕರನ ಕುಟುಂಬದಲ್ಲಿ ತಂದೆ-ತಾಯಿ, ಹೆಂಡತಿ ಮಕ್ಕಳು ಎಲ್ಲರಿಗೂ ಚಿಕಿತ್ಸೆ ಸಿಗಲಿದೆ. ಯಾವುದೇ ಕಾಯಿಲೆ ಮತ್ತು ಎಷ್ಟೇ ಖರ್ಚಾದರೂ ಈ ಯೋಜನೆ ಅಡಿ ಚಿಕಿತ್ಸೆ ಸಿಗಲಿದೆ. ನೌಕರರು ಪ್ರತಿ ತಿಂಗಳು 650ರಂತೆ ವಾರ್ಷಿಕ 8 ಸಾವಿರ ರೂ. ಕಟ್ಟಬೇಕು. ಈ ಯೋಜನೆ ಅಡಿ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. 250 ಆಸ್ಪತ್ರೆಗಳು 24 ಡಯಾಗ್ನಸ್ಟಿಕ್ ಸೆಂಟರ್, 6 ಆಯುರ್ವೇದ ಆಸ್ಪತ್ರೆಗಳು ಈ ಯೋಜನೆ ಅಡಿ ಸರ್ಕಾರ ಎಮ್‌ಒಯು (MOU) ಮಾಡಿಕೊಂಡಿದೆ. ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

 

 

ಯೋಜನೆ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದೊಂದು ಒಳ್ಳೆ ಕಾರ್ಯಕ್ರಮ. ಬಹಳ ದಿನದಿಂದ ಇದರ ಬೇಡಿಕೆ ಇತ್ತು. ಇಂದು ಜಾರಿ ಮಾಡಿದ್ದೇವೆ. ನೌಕರರು ಮತ್ತು ಅವರ ಕುಟುಂಬಗಳಿಗೂ ಅನ್ವಯ ಆಗಲಿದೆ, ಉಪಯೋಗ ಆಗಲಿದೆ. ಎಲ್ಲಿ ಬೇಕಾದರೂ ಚಿಕಿತ್ಸೆ ಪಡೆಯಬಹುದು. ಕಾರ್ಡ್ ತೋರಿಸಿದರೆ ಚಿಕಿತ್ಸೆ ಕೊಡುತ್ತಾರೆ. ಏನೇ ಕಾಯಿಲೆ ಇದ್ದರೂ ಚಿಕಿತ್ಸೆ ಸಿಗಲಿದೆ ಎಂದು ತಿಳಿಸಿದರು.

 

ಇದೇ ವೇಳೆ ನೊಂದಾಯಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದ ಸಿಎಂ, ಯಾವುದೇ ಕಾರಣಕ್ಕೂ ತಿರಸ್ಕಾರದಿಂದ ನೌಕರರನ್ನು ನೋಡಬೇಡಿ. ಆಸ್ಪತ್ರೆಗಳಿಗೆ ನೌಕರರು ಬಂದ ಕೂಡಲೇ ಚಿಕಿತ್ಸೆ ಕೊಡಬೇಕು. ಹಣ ಕೊಡುವವರಿಗೆ ಹೇಗೆ ಚಿಕಿತ್ಸೆ ಕೊಡುತ್ತೀರೋ ನೌಕರರಿಗೂ ಚಿಕಿತ್ಸೆ ಕೊಡಬೇಕು ಎಂದು ತಾಕೀತು ಮಾಡಿದರು.

 

250 ಆಸ್ಪತ್ರೆಗಳ ಜೊತೆ ಒಡಂಬಡಿಕೆ ಆಗಿದೆ. ಮುಂದೆ ಇನ್ನು ಜಾಸ್ತಿ ಆಸ್ಪತ್ರೆ ಆಗಲಿದೆ. ಇಂದು ಕೆಎಸ್‌ಆರ್‌ಟಿಸಿಗೆ ಆಗಿದೆ. ಉಳಿದ 3 ನಿಗಮಗಳಿಗೆ ಯೋಜನೆ ಜಾರಿ ಮಾಡುತ್ತೇವೆ. 3 ತಿಂಗಳಲ್ಲಿ 3 ನಿಗಮಗಳಲ್ಲಿ ಯೋಜನೆ ಜಾರಿ ಆಗಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಮಹದೇವಪ್ಪ ಸೇರಿ ಹಲವರು ಭಾಗಿಯಾಗಿದ್ದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement