Published
1 day agoon
By
Akkare Newsಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು ಪಕ್ಷ ನನಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ, ಆದರೆ ನನ್ನ ನೇತೃತ್ವದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಾಗಿಲ್ಲ, ಪಕ್ಷ ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ, ಹೀಗಾಗಿ ರಾಜಕೀಯದಲ್ಲಿ ಮುಂದುವರಿಯಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ ಎಂದರು.
ಈ ಹಿಂದೆಯೇ ರಾಜಕೀಯ ನಿವೃತ್ತಿ ಪಡೆಯಬೇಕೆಂದು ಯೋಚಿಸಿದ್ದೆ, ಈಗ ಕಾಲ ಪಕ್ಷವಾಗಿದೆ, ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಘೋಷಿಸಿದರು.