Published
16 hours agoon
By
Akkare Newsದಿನಾಂಕ 13-01-2025 ರ ಸೋಮವಾರ ಬೆಳಿಗ್ಗೆ 10:00 ಗಂಟೆಯಿಂದ ಅಪರಾಹ್ನ 2ರವರೆಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಪಂಚ ಗ್ಯಾರಂಟಿ ಯೋಜನೆಗಳ ನೋಂದಾವಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ, ಯುವನಿಧಿ ವಿಶೇಷ ನೋಂದಣಿ ಅಭಿಯಾನ ಹಾಗೂ ಗ್ಯಾರಂಟಿ ಅಹವಾಲು ಸಭೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಭರತ್ ಮುಂಡೋಡಿ ಹಾಗೂ ಮತ್ತಿತರ ಗಣ್ಯರು ಆಗಮಿಸಲಿದ್ದಾರೆ. ಪುತ್ತೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು, 5 ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಶಿಬಿರದಲ್ಲಿ ಉಪ್ಪಿನಂಗಡಿ, ಬಜತ್ತೂರು, ಹಿರೇಬಂಡಾಡಿ, ನೆಕ್ಕಿಲಾಡಿ, ಕೊಡಿಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೃಹ ಲಕ್ಷ್ಮಿ, ಗೃಹಜ್ಯೋತಿ,ಯುವನಿಧಿ,ಅನ್ನಭಾಗ್ಯ ,ಶಕ್ತಿ ಯೋಜನೆಯ ನೋಂದಾವಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಹಾಗೂ ಯುವನಿಧಿ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ.
ಗೃಹ ಲಕ್ಷ್ಮಿ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮನೆ ಸದಸ್ಯರ ಆಧಾರ್ ಕಾರ್ಡ್, ಪಡಿತರ ಚೀಟಿ, ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್, ಪಾನ್ ಕಾರ್ಡ್ ಪ್ರತಿ ತರುವಂತೆ ಕೋರಲಾಗಿದೆ.
ವಿಶೇಷವಾಗಿ ಪಂಚ ಗ್ಯಾರಂಟಿ ಯೋಜನೆಗಳ ಇಲಾಖೆಗಳ ಮಾಹಿತಿ ಕೇಂದ್ರ ತೆರೆಯಲಿದ್ದು ಸ್ಥಳದಲ್ಲೇ ಪರಿಹಾರ ಒದಗಿಸಲು ಉದ್ದೇಶಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.