Published
6 hours agoon
By
Akkare Newsಪುತ್ತೂರು: ಮಂಗಳೂರಿನ ಪ್ರತಿಷ್ಠಿತ ಗೋಕರ್ಣನಾಥೇಶ್ವರ ಬ್ಯಾಂಕ್ ನ ನಿರ್ದೇಶಕರಾಗಿ ಕೇಶವ ಪೂಜಾರಿ ಬೆದ್ರಾಳ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೇಶವ ಪೂಜಾರಿರವರು ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಪುತ್ತೂರು ತಾಲೂಕು ಸಮಿತಿಯ ಉಪಾಧ್ಯಕ್ಷರಾಗಿ, ಸಿಡ್ಕೋ ಬ್ಯಾಂಕ್ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇಲ್ಲಿ ಮಾಜಿ ಕಾರ್ಯದರ್ಶಿಯಾಗಿ, ಕೆಮ್ಮಿಂಜೆ ಶ್ರೀ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿಯಾಗಿ, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾಗಿ, ಚಿಕ್ಕಮುಡ್ನೂರು ಗ್ರಾಮದ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಕೇಶವ ಪೂಜಾರಿಯವರಿಗಿದೆ. ಪ್ರಸ್ತುತ ಇವರು ದರ್ಬೆ ರೇಗೊ ಬಿಲ್ಡಿಂಗ್ ನಲ್ಲಿ ನಂದಿಕೇಶ್ವರ ಇಲೆಕ್ಟ್ರಿಕಲ್ಸ್ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ.