Published
4 hours agoon
By
Akkare Newsಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಂಬರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ತಿಳಿಸಿದೆ. ಈ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.
73 ವರ್ಷದ ಮಾಜಿ ಸೇನಾ ಜನರಲ್ ಸುಬಿಯಾಂಟೊ 2024 ರ ಅಕ್ಟೋಬರ್ ನಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಈ ಭೇಟಿಯ ಸಮಯದಲ್ಲಿ, ರಾಷ್ಟ್ರಪತಿಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕಳೆದ ವರ್ಷ ಜೂನ್ ನಲ್ಲಿ ಪ್ರಧಾನಿಗೆ ಸುಬಿಯಾಂಟೊ ಅವರಿಂದ ಕರೆ ಬಂದಿತ್ತು. ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದರು.