Published
14 hours agoon
By
Akkare News
ಮಂಗಳೂರು: ಇಲ್ಲಿನ ನರಿಂಗಾನದಲ್ಲಿ ನಡೆದ 3ನೇ ವರ್ಷದ ಲವ – ಕುಶ ಜೋಡುಕರೆ ಕಂಬಳ ಕೂಟವು ಸೋಮವಾರ (ಜ.13) ಮುಂಜಾನೆ ಸಂಪನ್ನವಾಯಿತು.
ನರಿಂಗಾನ ಕಂಬಳದಲ್ಲಿ ದಾಖಲೆ ಸಂಖ್ಯೆಯ ಕೋಣಗಳು ಭಾಗವಹಿಸಿದ್ದವು. ಒಟ್ಟು 265 ಜೋಡಿ ಕೋಣಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಇದು ಕಂಬಳ ಇತಿಹಾಸದಲ್ಲಿ ಎರಡನೇ ಅತೊ ದೊಡ್ಡ ಸಂಖ್ಯೆ. ಈ ಹಿಂದೆ ಪುತ್ತೂರು ಕಂಬಳದಲ್ಲಿ 268 ಜೊತೆ ಕೋಣಗಳು ಭಾಗವಹಿಸಿದ್ದು ದಾಖಲೆ.
ಕನೆಹಲಗೆ ವಿಭಾಗದಲ್ಲಿ 10 ಜತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 28 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 28 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 25 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆ, ಸಬ್ ಜೂನಿಯರ್ ನೇಗಿಲು ವಿಭಾಗದಲ್ಲಿ 104 ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆ ಹಲಗೆ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮೆಟ್ಟಿದವರು: ಬೈಂದೂರು ರಾಗಿಹಿತ್ಲು ರಾಘವೇಂದ್ರ
ಕಾಂತಾವರ ಬೇಲಾಡಿ ಬಾವ ಪ್ರಜೋತ್ ಶೆಟ್ಟಿ
ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ನಾರಾವಿ ಯುವರಾಜ್ ಜೈನ್ “ಎ” (12.18)
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.45)
ಹಲಗೆ ಮೆಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ಹಗ್ಗ ಹಿರಿಯ
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ “ಎ” (11.83)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.89)
ಓಡಿಸಿದವರು: ಕಕ್ಯಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಎ”
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ”
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ನೇಗಿಲು ಹಿರಿಯ
ಪ್ರಥಮ: ಬೋಳ್ಯಾರು ಪೊಯ್ಯೆ ನರ್ಮದ ಉಮೇಶ್ ಶೆಟ್ಟಿ (11.56)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ (11.87)
ಓಡಿಸಿದವರು: ಕಕ್ಯಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ
ಪ್ರಥಮ: ಭಟ್ಕಳ ಎಚ್.ಎನ್ ನಿವಾಸ ಪಿನ್ನುಪಾಲ್ (12.07)
ಓಡಿಸಿದವರು: ಸೂರಾಲು ಪ್ರದೀಪ್ ನಾಯ್ಕ್
ದ್ವಿತೀಯ: ಮೂಡಬಿದ್ರೆ ನ್ಯೂ ಪಡಿವಾಳ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಳ್ (12.13)
ಓಡಿಸಿದವರು: ಒಂಟಿಕಟ್ಟೆ ರಿತೇಶ್
ಸಬ್ ಜೂನಿಯರ್ ನೇಗಿಲು
ಪ್ರಥಮ: ಶ್ರೀ ಸ್ವಾಮಿಧಾಮ ಹೊಳೆಕಟ್ಟು ಕುಂಭಾಶಿ (12.30)
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಸಾಣೂರು ಸೇನರಬೆಟ್ಟು ಜಗದೀಶ್ ಪೂಜಾರಿ (12.82)
ಓಡಿಸಿದವರು: ಭಟ್ಕಳ ಹರೀಶ್