Published
13 hours agoon
By
Akkare News
ಬೆಂಗಳೂರು: ದೀರ್ಘ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಜ.14,15ರಂದು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಜ.14ರಂದು ಹಾಗೂ ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಜ.15ರಂದು ಮಳೆಯಾಗಲಿದೆ. ಇನ್ನೂ ಉತ್ತರ, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.
ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ,ದಕ್ಷಿಣ ಕನ್ನಡ ,ಬೆಳಗಾವಿಯಲ್ಲಿ ಮಂಜು ಹೆಚ್ಚಿರಲಿದೆ